;

ಹೆಸರಾಂತ ಶಾಸಕರಿಂದ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ…!!!

ವರದಿ. ಶಶಿಕುಮಾರ್ ಚಳ್ಳಕೆರೆ

ಚಳ್ಳಕೆರೆ ಶಾಸಕರಾದ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ.

ಇಂದು ಶಾಸಕರು ರೈತರ ಹಿತ ಕಾಪಾಡುವ ಸಲುವಾಗಿ ಶಾಸಕ ಟಿ ರಘುಮೂರ್ತಿ ದಿಟ್ಟ ನಿರ್ಧಾರ.
ನದಿ ಮೂಲಗಳ ಉಳಿವಿಗೆ ಶಾಸಕರ ಅವಿರತ ಪ್ರಯತ್ನ.
ತಾಲ್ಲೂಕು ಮಟ್ಟದ ಅಧಿಕಾರಿಗಳಾದ ತಹಶೀಲ್ದಾರ್ ಮಲ್ಲಿಕಾರ್ಜುನ್ ಡಿವೈಎಸ್ಪಿ ಶ್ರೀಧರ್ ಪಿಎಸ್ಐ ರಾಘವೇಂದ್ರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಲಿಂಗರಾಜು ಚಂದ್ರಶೇಖರ್ ಕುಮಾರ್ ನಾಯಕ್ ತಂಡದೊಂದಿಗೆ ಕಾನೂನು ಬಾಹಿರ ಅಕ್ರಮ ಗಣಿಗಾರಿಕೆ ಮೇಲೆ ದಾಳಿ.

ಅಕ್ರಮ ಗಣಿಗಾರಿಕೆ ತಡೆಯುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಶಾಸಕ ಟಿ ರಘುಮೂರ್ತಿ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಹಾಗು ಭೂವಿಜ್ಞಾನ ಇಲಾಖೆ
ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಗಣಿಗಾರಿಕೆ ಹಾಗೂ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಹಾಗಾಗ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇಂದು ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಗೋರ್ಲತ್ತು, ಕರಮರಹಳ್ಳಿ, ನಾರಾಯಣಪುರ ಸೇರಿದಂತೆ ಅಕ್ರಮ ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಿ, ಅಕ್ರಮ ಗಣಿಗಾರಿಕೆ ಸ್ಥಳಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಅಧಿಕಾರಿಗಳೊಂದಿಗೆ ಅಕ್ರಮ ಗಣಿಗಾರಿಕೆ ಅಡ್ಡೆಗಳನ್ನು ಪರಿಶೀಲಿಸಿದ ಶಾಸಕರು, ನದಿ ಮೂಲಗಳನ್ನು ಉಳಿಸಿಕೊಳ್ಳುವುದು ಹಾಗೂ ರೈತರ ಹಿತ ಕಾಪಾಡುವ ಹಿತದೃಷ್ಟಿಯಿಂದ ಅಕ್ರಮ ಅಡ್ಡೆಗಳನ್ನು ತಡೆಗಟ್ಟಲು ದಿಟ್ಟ ನಿರ್ಧಾರ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;