ವರದಿ. ಎಚ್ಚರಿಕೆ ಕನ್ನಡ ನ್ಯೂಸ್

ಕೋವಿಡ್ ನಿಯಂತ್ರಣಕ್ಕಾಗಿ ಸರಳ ವೈರಮುಡಿ ಆಚರಣೆ: ಜಿಲ್ಲಾಧಿಕಾರಿ
ಮಂಡ್ಯ.ಮಾ.15- ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದು, ಸದರಿ ಆಚರಣೆಗೆ ಅಂತರ್ರಾಜ್ಯ, ಅಂತರ್ಜಿಲ್ಲೆ, ಮಂಡ್ಯದ ಇತರೆ ತಾಲ್ಲೂಕುಗಳಿಂದ ಬರುವ ಭಕ್ತಾಧಿಗಳನ್ನು ನಿರ್ಬಂಧಿಸಲಾಗಿದೆÉ ಎಂದು ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿರವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಮೇಲುಕೋಟೆಯ ವೈರಮುಡಿ ಬ್ರಹ್ಮೋತ್ಸವ ಆಚರಣೆಯ ಪೂರ್ವಭಾವಿ ಸಬೆಯಲ್ಲಿ ಮಾತನಾಡಿದ ಅವರು, ಮಾರ್ಚ್ 19 ರಿಂದ ಮಾರ್ಚ್ 31 ರವರೆಗೆ ವಿಶ್ವ ವಿಖ್ಯಾತಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಜರುಗಲಿದ್ದು, ಮಾರ್ಚ್ 24ರಂದು ಶ್ರೀ.ಚಲುವನಾರಾಯಣ ಸ್ವಾಮಿಯವರಿಗೆ ವೈರಮುಡಿ ಕಿರೀಟಧಾರಣಾ ಮಹೋತ್ಸವವು ನಡೆಯಲಿದೆ. ಸದರಿ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುವುದರಿಂದ ಮಾರ್ಚ್ 12ರ ಸರ್ಕಾರದ ಆದೇಶದಂತೆ ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಸೂಚಿಸಲಾಗಿದೆ ಎಂದರು.
ಭಕ್ತಾಧಿಗಳ ದರ್ಶನಕ್ಕೆ ದೇವಸ್ಥಾನದ 2 ಪ್ರವೇಶ ದ್ವಾರದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಪ್ರವೇಶದ್ವಾರದಲ್ಲಿಯೇ ಕೋವಿಡ್-19 ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗುವುದು ಹಾಗೂ ನೆಗೆಟಿವ್ ವರದಿ ಬಂದವರಿಗೆ ಸೀಲ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.
ಆಚರಣೆಯಲ್ಲಿ 2000 ಕ್ಕಿಂತ ಹೆಚ್ಚಿನ ಭಕ್ತಾಧಿಗಳು ಸೇರದಂತೆ ವ್ಯವಸ್ಥೆ ಮಾಡಲಾಗಿದ್ದು, ದೇವಸ್ಥಾನದ ಪ್ರಾಂಗಣದೊಳಗೆ ಒಂದು ಬಾರಿಗೆ ನೂರಕ್ಕಿಂತ ಹೆಚ್ಚು ಜನರಿಗೆ ಪ್ರವೇಶವಿಲ್ಲ ಎಂದರು.
ದೇವಸ್ಥಾನದಲ್ಲಿ ನಿಯೋಜಿಸಿರುವ ಅರ್ಚಕರು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ಹೊರತುಪಡಿಸಿ, ಹೆಚ್ಚುವರಿ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.
ದೇವಾಲಯದ ಆವರಣದಲ್ಲಿ ಗುಂಪುಗೂಡುವುದನ್ನು ಹಾಗು ರಾತ್ರಿವೇಳೆಯಲ್ಲಿ ತಂಗುವಿಕೆಯನ್ನು ನಿರ್ಬಂಧಿಸಲಾಗಿದೆ ಎಂದರು.
ಒಳ ಮತ್ತು ಹೊರ ಆವರಣದಲ್ಲಿ ಯಾವುದೇ ರೀತಿಯ ಸಾಮೂಹಿಕ ಭೋಜನ ವ್ಯವಸ್ಥೆ, ಪ್ರಸಾದ ವಿತರಣೆ ಇರುವುದಿಲ್ಲ ಹಾಗೂ ಸುತ್ತಮುತ್ತಲಿನ ಹೊಟೇಲ್ಗಳನ್ನು ತೆರೆಯದಂತೆ ಆದೇಶಿಸಲಾಗಿದೆ ಎಂದರು.
ಸದರಿ ಬ್ರಹ್ಮೋತ್ಸವವು ಬೆಳಗ್ಗಿನ ಜಾವ 3 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ರಾತ್ರಿ 12 ಗಂಟೆಯೊಳಗೆ ಮುಗಿಯುವಂತೆ ಕ್ರಮವಹಿಸಲಾಗಿದೆ ಎಂದರು.
ಸರಳ ಆಚರಣೆಗೆ ಸಾರ್ವಜನಿಕರು ಸಹಕರಿಸಿ, ಸ್ಥಳದಲ್ಲಿ ಮಾಸ್ಕ್ ಧರಿಸಿ, ನಿಯೋಜಿಸಿರುವ ಸ್ಯಾನಿಟೈಸರ್ ಬಳಸಿ ಹಾಗೂ 3.25 ಚ.ಮೀ ದೈಹಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆಯಬೇಕು ಎಂದರು.
ಸದರಿ ಸಭೆಯಲ್ಲಿ ಪಾಂಡವಪುರದ ಉಪವಿಭಾಗಾಧಿಕಾರಿಗಳಾದ ಶಿವಾನಂದಮೂರ್ತಿ, ಪೆÇಲೀಸ್ ವರಿμÁ್ಠಧಿಕಾರಿ ಡಾ. ಅಶ್ವಿನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ, ವಾರ್ತಾಧಿಕಾರಿ ಟಿ.ಕೆ ಹರೀಶ್, ಪಾಂಡವಪುರ ತಾಲ್ಲೂಕಿನ ತಹಶಿಲ್ದಾರ್ ಪ್ರಮೋದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
