;

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸದ ರಾಜ್ಯ ಸರ್ಕಾರ: ಎ.ಐ.ಟಿ.ಯು.ಸಿ ಯಿಂದ ಪ್ರತಿಭಟನೆ.!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ವಿವಿಧ ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರ ಫೆಡರೇಷನ್ ಕಾರ್ಯಕರ್ತರಿಂದ ಪಟ್ಟಣದಲ್ಲಿ ಧರಣಿ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಇಲ್ಲಿನ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದಕಾರ್ಯಕರ್ತರುಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಸರ್ಕಾರ ಸೇವೆಗೆ ಅನುಗುಣವಾಗಿ ವೇತನ ನೀಡದೆ ವಂಚಿಸಲಾಗುತ್ತಿದೆ. ಮಕ್ಕಳನ್ನು ಪೋಷಣೆ ಮಾಡುವ ಜತೆಗೆ ಸರ್ಕಾರದ ಎಲ್ಲ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸುತ್ತಿದ್ದರೂ ಈವರೆಗೂ ಅವರನ್ನು ಸರ್ಕಾರಿ ನೌಕರರೆಂದು ಪರಿಗಣನೆ ಮಾಡಿಲ್ಲ. ಇದರಿಂದ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ಗೌರವಧನ ವೇತನ ರಾಜ್ಯದಲ್ಲಿಯೂ ಆಧಾರದಲ್ಲಿ ಗೌರವ ಧನ ಹೆಚ್ಚಳ ಮಾಡುವ ಜತೆಗೆ ಗೋವಾ ರಾಜ್ಯದ ಮಾಧರಿಯನ್ನು ಅನುಸರಿಸಿ ಅದೇ ಯೋಜನೆಯನ್ನು ಜಾರಿ ಮಾಡಬೇಕು. ಪ್ರತಿವರ್ಷ ಸೇವೆಗೆ ತಕ್ಕಂತೆ ಇಂತಿಷ್ಟು ಮೊತ್ತವನ್ನು ನಿಗದಿಪಡಿಸಿ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. 2015ರ ನಂತರನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಇಡಿಗಂಟು ನೀಡುವ ಜತೆಗೆ ಕನಿಷ್ಠ 5 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಉಚಿತ ವೈದ್ಯಕೀಯ ಸೌಲಭ್ಯ ನೀಡಿ ಇಎಸ್‌ಐ ಸೌಲಭ್ಯವನ್ನು ನಮಗೂ ವಿಸ್ತರಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿಯನ್ನು ಆರಂಭಿಸಿ ತರಬೇತಿ ನೀಡುವ ಮುಖೇನ ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ ಮಾಡುವ ಜತೆಗೆ ಗೌರವಧನ ಅಂತರವನ್ನು ಕಡಿಮೆ ಮಾಡಬೇಕು. ಇಲ್ಲಿದ್ದಿದ್ದರೆ ಸರ್ಕಾರ ವಿವಿಧ ಸರ್ವೆ ಕಾರ್ಯಕ್ರಗಳ ವರದಿಯನ್ನು ನೀಡುವುದಿಲ್ಲ. ಹಾಗಾಗಿ ಸರ್ಕಾರ ಕೂಡಲೆ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ಅರವಿಂದ ಬಾಯಿ, ಡಿ ನಾಗರತ್ನ, ಸಿ.ಜಿ.ರಾಜೇಶ್ವರಿ, ಉಮಾದೇವಿ, ಜ್ಯೋತಿ, ಲಕ್ಷ್ಮಿದೇವಿ, ಗೀತಾ ಲಕ್ಷ್ಮಿ ಸುಪ್ರಿಯಾ, ಸುವರ್ಣ, ಪಾಲಮ್ಮ, ಅಂಜಿನಮ್ಮ, ಭಾಗ್ಯಮ್ಮ, ರಜಿಯಾಬಿ, , ನಾಗರತ್ನಮ್ಮ, ಗಂಗಮ್ಮ ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;