;

ತುಂಗಭದ್ರಾ ನೀರು ಹರಿಸಿ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮಾಡಲಾಯಿತು…!!”

ವರದಿ. ದುಗ್ಗಪ್ಪ ಸಿಂಧನೂರು
ಸಿಂಧನೂರು ತಾಲೂಕು ಮಹಾತ್ಮ ಗಾಂಧಿ ವ್ರತ್ತದಲ್ಲಿ ತುಂಗಭದ್ರ ಎಡದಂಡೆ ಕಾಲುವೆ ಏಪ್ರಿಲ್ 15 ವರೆಗೆ ನೀರು ಹರಿಸಿ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮಾಡಲಾಯಿತು . ತಾಲೂಕಿನಲ್ಲಿ ಜೋಳ ಬೆಳೆದಿದ್ದು ಅದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಬೆಲೆಯಿಲ್ಲದ  ಕಾರಣ ರೈತರು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ . ಪ್ರತಿ ಎಕರೆಗೆ 15 ಕ್ವಿಂಟಾಲ್ ಜೋಳ ಖರೀದಿಗೆ ಸರ್ಕಾರ ಆದೇಶವಿದೆ ಅಧಿಕಾರಿಗಳು ಹೇಳುತ್ತಿದ್ದಾರೆ. ಇನ್ನುಳಿದ  ಜೋಳ ಕಡಿಮೆ ಬೆಲೆಗೆ ಮಾರಾಟ ಮಾಡಿ ರೈತರು ನಷ್ಟ ಅನುಭವಿಸಬೇಕಾಗಿದೆ ,            ಕಾರಣ 25 ಕ್ವಿಂಟಾಲ್ ಗೆ ಏರಿಕೆ ಮಾಡಬೇಕು ಏಪ್ರಿಲ್ನಲ್ಲಿ ಬತ್ತದ ಕಟಾವು ಬರುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಬತ್ತಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಸೋಮನಗೌಡ ಬಾದರ್ಲಿ , ಹನುಮೇಶ್ ಬಾಗೋಡಿ ,ಖಾಜಾ ರೌಡಕುಂದಾ, ಪ್ರಭು ದೇವರಗುಡಿ, ಅಮರೇಶ ಹತ್ತಿಗುಡ್ಡ, ಧ್ರಾಕ್ಷಾಯಿಣಿ, ಸೇರಿದಂತೆ ಹಲವಾರು ಮಹಿಳೆಯರು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು .ಕಾಂಗ್ರೆಸ್ ಪಕ್ಷದ ಮುಖಂಡರನ್ನು ಕಾರ್ಯಕರ್ತರನ್ನು ಪೋಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;