;

ಮೊಳಕಾಲ್ಮುರು: ಕನ್ನಡಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಪೂರ್ವಭಾವಿ ಸಭೆ.!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: * ಪಟ್ಟಣದ ಕನ್ನಡಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಪೂರ್ವಭಾವಿ ಸಭೆ..* ಸರ್ಕಾರದ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸುವುದರ ಮೂಲಕ ಈ ಬಾರಿಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸರಳವಾಗಿ ನಡೆಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಡಿ.ಓ. ಮುರಾರ್ಜಿ ತಿಳಿಸಿದರು. ಪಟ್ಟಣದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ದಿನಾಂಕ 27.3.2021 ರಂದು ತಾಲ್ಲೂಕು ನುಡಿಹಬ್ಬವನ್ನು ಸರಳವಾಗಿ ಆಚರಿಸಲಾಗುವುದು. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲ್ಲೂಕಿನ ಚಿಕ್ಕುಂತಿ ಗ್ರಾಮದ ಅಲೆಮಾರಿ ಜನಾಂಗದ ಹಿರಿಯ ಜೀವಿ ಹಗಲು ವೇಷ ಧೂಪಂ ಆಂಜಿನಪ್ಪನವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಕ.ಸಾ.ಪ.ಪ್ರಧಾನ ಕಾರ್ಯ ದರ್ಶಿಗಳಾದ ಕೆ.ಓ.ಶಿವಣ್ಣ, ನೀಲರಾಜ್, ಗೌರವ ಅಧ್ಯಕ್ಷ ವಕೀಲ ರಾಜಶೇಖರ, ವಕೀಲ ಮಂಜುನಾಥಸ್ವಾಮಿ ನಾಯಕ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶುಭಪೃಥ್ವಿರಾಜ್, ಬಿ.ಜೆ.ಪಿ. ಮಹಿಳಾ ಮೋರ್ಚಾ ಸರ್ವಮಂಗಳ ಚಂದ್ರಶೇಖರ್, ವಕೀಲೆ ವಿಜಯಲಕ್ಷ್ಮಿ, ಕ.ಸಾ.ಪ. ಮಹಿಳಾ ವನಿತಾ
ಗಿರೀಶ್, ಜ್ಯೋತಿ ನಾಗೇಶ್, ಸ್ನೇಹ ರಾಘವೇಂದ್ರ, ಮಂಜುನಾಥ ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;