;

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮದಲ್ಲಿ ವಿಶ್ವ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮಕ್ಕೆಚಾಲನೆ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ದಿನಾಂಕ 24 .3. 2021 ವಿಜಯನಗರ ಜಿಲ್ಲೆ ಕೂಡ್ಲಿಗಿ* *ತಾಲೂಕು ಗುಡೆಕೋಟೆ*

*ಗ್ರಾಮದಲ್ಲಿ ವಿಶ್ವ ಕ್ಷಯ ರೋಗ*
*ನಿರ್ಮೂಲನ ಕಾರ್ಯಕ್ರಮಕ್ಕೆ* *ಚಾಲನೆ:—–* ಗುಡೇಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಷಯರೋಗ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಡಾಕ್ಟರ್ ಶ್ರೀಧರ ಬಾಬು ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದರು. ವಿಜಯನಗರ ಜಿಲ್ಲೆಯನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನು ಮಾಡೋಣ, ಮನುಕುಲವನ್ನು ಪ್ರಾಚೀನಕಾಲದಿಂದಲೂ ಕಾಡುತ್ತಿರುವ ಸಾಂಕ್ರಾಮಿಕ ರೋಗ ಕ್ಷಯ( ಟಿಬಿ) ಈ ರೋಗ ಸಾಂಕ್ರಾಮಿಕ ರೋಗವಾಗಿದ್ದು ಇದರ ನಿರ್ಮೂಲನೆಗೆ ವಿಶ್ವಸಂಸ್ಥೆ ಶ್ರಮಿಸುತ್ತದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪ್ರತಿವರ್ಷ ಮಾರ್ಚ್ 24ರಂದು ವಿಶ್ವ ಕ್ಷಯ ರೋಗ ದಿನ ವನ್ನಾಗಿ ಆಚರಿಸಲಾಗುವುದು. ಸಂಕ್ಷಿಪ್ತವಾಗಿ ಟಿಬಿ ಎಂದು ಕರೆಸಿಕೊಳ್ಳುವ ಈ ರೋಗವು ಮೈಕ್ರೋ ಬ್ಯಾಕ್ಟೀರಿಯಂ ಟ್ಯೂಬರ್ ಕ್ಯೂಲೋಸಿಸ್ ಎಂಬ ಬ್ಯಾಕ್ಟೀರಿಯದಿಂದ ಬರುತ್ತದೆ ಎಂದು ಹೇಳಿದರು.


ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಲಿತಮ್ಮ ಗೋವಿಂದಪ್ಪ ಇವರು. ಸಂಜೆಯ ವೇಳೆ ಜ್ವರ ಅಥವಾ ಕೆಮ್ಮು ಕಫ ಎರಡು ವಾರಕ್ಕೋ ಹೆಚ್ಚಿನ ದಿನದಿಂದ ಶ್ವಾಸಕೋಶಕ್ಕೆ ಹಾನಿ ಮಾಡುವುದಲ್ಲದೆ ಹಸಿವಿಲ್ಲದೆ ದೇಹದ ತೂಕವನ್ನು ಕಡಿಮೆ ಮಾಡುತ್ತದೆ ಈ ರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ತಾತ್ಸಾರ ಮಾಡದೆ ಕೂಡಲೇ ಸಂಬಂಧಪಟ್ಟ ಅರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ರೋಗವು ಮಾರಕವಾಗಿ ಹೆಚ್ಚಿನ ಜನಗಳಲ್ಲಿ ಹರಡುವ ಸಾಧ್ಯತೆ ಇದೆ ಎಂದು ಮಾತನಾಡಿದರು.
ಈ ರೋಗದ ಲಕ್ಷಣಗಳು ಇರುವವರು ಏಕಾಂಗಿಯಾಗಿದ್ದು ಬೇರೆಯವರಿಗೆ ಹರಡದಂತೆ ಚಿಕಿತ್ಸೆ ಪಡೆಯಿರಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪನವರು ಹೇಳಿದರು. ಈ ಕ್ಷಯರೋಗದ ಬಗ್ಗೆ ಇನ್ನೂ ಅನೇಕ ಮುಂಜಾಗ್ರತೆ ಕಾರ್ಯಕ್ರಮಗಳ ಬಗ್ಗೆ ವೈದ್ಯಾಧಿಕಾರಿಗಳು ಜಾಗೃತಿ ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಗುಡೆಕೋಟೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳಾದ ಡಾಕ್ಟರ್ ಶ್ರೀಧರ ಬಾಬು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಲಿತಮ್ಮ ಗೋವಿಂದಪ್ಪ. ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪನವರು. ಹಿರಿಯ ಆರೋಗ್ಯ ಸಹಾಯಕರಾದ ಸೈಯದ್ ವಾಹಬ್.L.H.V ಮಂಜುಳಾ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಭಾಕರ ಪ್ರಹಲಾದ್. ಗಾಯತ್ರಿ ಶೈಲಜ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಗ್ರಾಮದ ಪ್ರಮುಖರು ಸಾರ್ವಜನಿಕರು ಉಪಸ್ಥಿತರಿದ್ದರು….

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;