ಅಶೋಕ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ, ಕರಡಿ ಮೃತದೇಹ ಪತ್ತೆ.!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: ತಾಲೂಕಿನ ಅಶೋಕ ಸಿದ್ದಾಪುರ ಗ್ರಾಪಂ ವ್ಯಾಪ್ತಿಯ ರೊಪ್ಪ ಗ್ರಾಮದ ಹೊರವಲಯದ ಸ್ಮಶಾನದ ಸಮೀಪ ಕರಡಿಯೊಂದರ ಮೃತದೇಹ ಮಂಗಳವಾರ ಪತ್ತೆಯಾಗಿದೆ. ರಾತ್ರಿ ಈ ಕರಡಿ ಮೃತಪಟ್ಟಿದ್ದು, ಅದರ ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಯಾರೋ ಹೊಡೆದು ಕೊಂದಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳೀಯರು ಕರಡಿಯ ಮೃತದೇಹ ಕಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಎಸಿಎಫ್ ಮಂಜುನಾಥ, ಅರಣ್ಯಾಧಿಕಾರಿ ನಾಗೇಂದ್ರನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕರಡಿಯ ಶವದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಶವಪರೀಕ್ಷೆ ನಡೆಸಿ ನ್ಯಾಯಾಧೀಶರ ಅನುಮತಿ ಮೇರೆಗೆ ಶವ ಸಂಸ್ಕಾರ ನೆರವೇರಿಸಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend