;

ಜಲಶಕ್ತಿ ಅಭಿಯಾನ-ಸಮಗ್ರ ವರದಿ ನೀಡಿ,ಡಿಸಿ ಪವನ ಕುಮಾರ್ ಮಲಪಾಟಿ-ಸೂಚನೆ…!!!

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಜಲಶಕ್ತಿ ಅಭಿಯಾನ-ಸಮಗ್ರ ವರದಿ ನೀಡಿ,ಡಿಸಿ ಪವನ ಕುಮಾರ್ ಮಲಪಾಟಿ-ಸೂಚನೆ*-
ಬಳ್ಳಾರಿ,ಜಲಶಕ್ತಿ ಅಭಿಯಾನಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು,ಕೈಗೆತ್ತಿಕೊಂಡಿರುವ ಕಾಮಗಾರಿ ಕುರಿತು.100 ದಿನಗಳ ಸಮಗ್ರ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು ಎಂದು, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಕಚೇರಿಯ ಸಭಾಂಗಣದಲ್ಲಿ ಜಲಶಕ್ತಿ ಅಭಿಯಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಜಲಶಕ್ತಿ ಅಭಿಯಾನದಡಿ ಜಲಸಂರಕ್ಷಣೆ ಮತ್ತು ಮಳೆನೀರು ಕೊಯ್ಲು,ಸಾಂಪ್ರಾದಾಯಿಕ ಮತ್ತು ಇತರೆ ಜಲಮೂಲಗಳು/ಕೆರೆಗಳ ನವೀಕರಣ,ಬೋರವೆಲ್‍ಗಳ ಮರುಪೂರಣ ಮತ್ತು ಮರುಬಳಕೆ,ಜಲಾನಯನ ಅಭಿವೃದ್ಧಿ,ವ್ಯಾಪಕರ ಅರಣ್ಯೀಕರಣ ಕೈಗೆತ್ತಿಕೊಳ್ಳಲಾಗುವುದು.ವಿವಿಧ ಇಲಾಖೆಗಳ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 1ರಿಂದ ಜೂನ್ ಅಂತ್ಯದವರೆಗೆ ಅಂದರೇ 100 ದಿನಗಳ ಕ್ರಿಯಾಯೋಜನೆಯನ್ನು ವಿವರವಾಗಿ ರೂಪಿಸಿ ಸಲ್ಲಿಸ ಬೇಕೆಂದರು.ಈಗಾಗಲೇ ರೂಪಿಸಿದ್ದರೇ ಅದನ್ನು ಕಾರ್ಯಪ್ರವೃತ್ತಗೊಳಿಸುವಂತೆ ಸೂಚನೆ ಡಿಸಿ ಸೂಚನೆ ನೀಡಿದರು, 100 ದಿನಗಳಲ್ಲಿ ಜಲಶಕ್ತಿ ಅಭಿಯಾನದಡಿ ಕಣ್ಣಿಗೆ ಕಾಣುವಂತ ಅಭಿವೃದ್ಧಿಯನ್ನು,ಇಲಾಖೆಯ ಅಧಿಕಾರಿಗಳು ಮಾಡುವ ನಿಟ್ಟಿನಲ್ಲಿ ಮುಂದಾಗಿ ಎಂದು ಅವರು ಸಲಹೆ ನೀಡಿದರು.
ಕಲ್ಯಾಣಿ,ನಾಲಾಗಳು ಮುಂತಾದ ಸಾಂಪ್ರದಾಯಿಕ ಜಲಮೂಲಗಳ ಒತ್ತುವರಿಯನ್ನು ತೆರವುಗೊಳಿಸಲು ಎಲ್ಲ ತಾಲೂಕುಗಳ ತಹಸೀಲ್ದಾರರಿಗೆ ಸೂಚಿಸಿದರು.
*ಮಾಹಿತಿ ನೀಡಿ- ಸಿ.ಇ.ಓ ನಂದಿನಿ*-
ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿಯವರು ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಬಳಸುವ ಬೋರವೆಲ್‍ಗಳ ವಾಟರ್‍ಲೇವೆಲ್ ಟೇಬಲ್ ಮಾಹಿತಿ ನೀಡುವಂತೆ. ಆದ್ಯತೆಯ ಮೇರೆಗೆ ರಿಚಾರ್ಜ್ ಪಿಟ್ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು
ಜಿಲ್ಲೆಯಲ್ಲಿರುವ ಎಲ್ಲ ಸರಕಾರಿ ಶಾಲೆಗಳು ಮತ್ತು ವಸತಿನಿಲಯಗಳಿಗೆ ಮಳೆನೀರು ಕೊಯ್ಲು ಅಳವಡಿಸುವುದು,ಹಾಸ್ಟೆಲ್ ಕಟ್ಟಡಗಳ ಆವರಣಗಳಲ್ಲಿ ಸ್ವಚ್ಛತೆ ಕಾಪಾಡಲು ಬಚ್ಚಲುಗುಂಡು ನಿರ್ಮಿಸಬೇಕು ಮತ್ತು ಪೌಷ್ಠಿಕ ತೋಟ ಮಾಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಸೂಚಿಸಿದರು.
*ಒಟ್ಟು89 ಕೆರೆಗಳು*-
ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಅಡಿ 89 ಕೆರೆಗಳು ಬರುತ್ತಿದ್ದು,ಅವುಗಳಲ್ಲಿ 2 ಕೆರೆಗಳು ತಾತ್ಕಾಲಿಕ ಒತ್ತುವರಿಯಾಗಿವೆ. ಅವುಗಳ ಒತ್ತುವರಿ ತೆರವುಗೊಳಿಸಲು ಕ್ರಮವಹಿಸುವುದಾಗಿ ಸಣ್ಣ ನೀರಾವರಿ ಎಂಜನಿಯರ್ ಸಭೆಗೆ ತಿಳಿಸಿದರು.
ಈ ವರ್ಷ 20 ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಕ್ರಿಯಾಯೋಜನೆ ರೂಪಿಸಿಕೊಂಡು ಕೆರೆಹೂಳೆತ್ತುವಿಕೆ,ಕೆರೆ ಏರಿ ದುರಸ್ಥಿ,ಕೆರೆ ಅಂಚಿನ ಖಾಲಿ ಪ್ರದೇಶದಲ್ಲಿ ಸಸಿಗಳನ್ನು ನೆಡುವಿಕೆ, ಕೆರೆ ಕೋಡಿ ಮತ್ತು ರೈತರ ಜಮೀನುಗಳಿಗೆ ನೀರು ಹರಿದುಹೋಗುವ ಕಾಲುವೆಗಳನ್ನು ದುರಸ್ತಿಗೊಳಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
*ಹೊಸ ಕೆರೆ ನಿರ್ಮಾಣ*-
ಗ್ರಾಪಂ ವ್ಯಾಪ್ತಿಯ ಸರಕಾರಿ ಜಾಗದಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ,ಹೊಸದಾಗಿ ಕೆರೆಗಳನ್ನು ಈ ಜಲಶಕ್ತಿ ಅಭಿಯಾನದಡಿ ನಿರ್ಮಿಸುವುದಕ್ಕೆ ಕ್ರಿಯಾಯೋಜನೆ ರೂಪಿಸುವಂತೆ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಸೂಚನೆ ನೀಡಿದರು.
ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಇರುವ ಕಲ್ಯಾಣಿಗಳನ್ನು ಗುರುತಿಸಿ ಅವುಗಳನ್ನು ಪುನಶ್ಚೇತನಗೊಳಿಸಲಾಗುವುದು. ನಾಲಾ ಪುನಶ್ಚೇತನ,ಗೋಕಟ್ಟೆಗಳ ನಿರ್ಮಾಣ, ರೈತರ ಜಮೀನುಗಳಲ್ಲಿ ಬದು,ಕೃಷಿಹೊಂಡ ಮತ್ತು ತೆರೆದ ಬಾವಿಗಳ ನಿರ್ಮಾಣಕ್ಕೂ ಕ್ರಮವಹಿಸಲಾಗುವುದು ಎಂದರು.
ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ಕಾರ್ಯನಿರ್ವಾಹಕ ಎಂಜನಿಯರ್ ಕಾಳಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;