;

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು….!!!

ನ್ಯೂಸ್ ಬ್ಯುರೋ ಎಚ್ಚರಿಕೆ ನ್ಯೂಸ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣ ದಾಖಲಾದ ದಿನ ಇದಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,03,794 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಕಳೆದ ವರ್ಷ ಕೊರೋನಾ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಭಾರತ ಕಂಡ ಕೋವಿಡ್-19 ಪ್ರಕರಣಗಳಲ್ಲಿ ಇದು ದಾಖಲೆಯಾಗಿದೆ. 2020 ರ ಸೆಪ್ಟೆಂಬರ್ 16 ರಂದು ಭಾರತದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣ ದಾಖಲಾಗಿತ್ತು. ಅಂದು 97,894 ಜನರಿಗೆ ಸೋಂಕು ತಗುಲಿತ್ತು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;