;

ಸಾರಿಗೆ ನೌಕರರ ಮುಷ್ಕರ, ಸರ್ಕಾರಿ ಬಸ್ ಗಳ ಸಂಚಾರ ಸ್ತಬ್ದ…!!!

ವರದಿ. ನಳಿನಿ ಬೆಂಗಳೂರು

ಬೆಂಗಳೂರು, ಏಪ್ರಿಲ್ 7: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಧರಣಿ ಆರಂಭಿಸಿದ್ದು, ಕೆಎಸ್‌ಆರ್‌ಟಿಡಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ.

ಇಂದಿನಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ ಆರಂಭಗೊಳ್ಳಲಿದ್ದು, ಸುಮಾರು 24 ಸಾವಿರ ಬಸ್‌ಗಳು ಸಂಚರಿಸುವುದಿಲ್ಲ.

ಕಳೆದ ಡಿಸೆಂಬರ್‌ನಲ್ಲಿಯೂ ಸಾರಿಗೆ ನೌಕರರು ನಾಲ್ಕು ದಿನಗಳ ಕಾಲ ಮುಷ್ಕರ ನಡೆಸಿದ್ದರು.

ಮೂರು ತಿಂಗಳ ಅಂತರದಲ್ಲಿ ಮತ್ತೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಸದ್ಯಕ್ಕೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

6ನೇ ವೇತನ ಆಯೋಗದ ಶಿಫಾರಸು ಜಾರಿ ಸದ್ಯಕ್ಕೆ ಸಾಧ್ಯವಿಲ್ಲ ಹಾಗೂ ಈ ವಿಷಯದಲ್ಲಿ ಸಂಧಾನದ ಪ್ರಶ್ನೆ ಇಲ್ಲ. ಮುಷ್ಕರ ನಡೆಸಿದರೆ ಎಸ್ಮಾ ಕಾಯ್ದೆ ಹೇರಲು ಹಿಂಜರಿಯುವುದಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಆದರೆ ನಮ್ಮ ಪ್ರಮುಖ ಬೇಡಿಕೆಯನ್ನೇ ಕಡೆಗಣಿಸಲಾಗಿದೆ ಎಂದು ನೌಕರರು ಮುಷ್ಕರ ನಡೆಸುವ ಬಿಗಿಪಟ್ಟು ಹಿಡಿದಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;