ವರದಿ. ಮಂಜುನಾಥ್, ಎಚ್

ಚಿತ್ರದುರ್ಗ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೇರಹಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಅವರು ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಶಯ ನೀಡುವ ರಾಜ್ಯ ಪ್ರಶಸ್ತಿಗೆ ಭಾಜನವಾಗಿದ್ದಾರೆ. ನರೇಗಾ ಯೋಜನೆಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ತಾಲೂಕಿನ ಚಿಕ್ಕೇರಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಅವರು ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಶಯ ನೀಡುವ ರಾಜ್ಯ ಪ್ರಶಸ್ತಿಗೆ ಭಾಜನವಾಗಿದ್ದಾರೆ. ಸದಾ ಬರಗಾಲಕ್ಕೆ ತುತ್ತಾಗುತ್ತಿರುವ ತಾಲೂಕಿನ
ಚಿಕ್ಕೇರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜಿಲ್ಲೆಯ ಆರು ತಾಲೂಕುಗಳ ಪೈಕಿ ಅತಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿದ್ದಾರೆ.

ಈಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆ 2020-21ನೇ ಸಾಲಿನ ಉತ್ತಮ ಅಧಿಕಾರಿ ಎಂದು ಪರಿಗಣಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಏಪ್ರಿಲ್ 9 ರಂದು ಶುಕ್ರವಾರ ಹುಬ್ಬಳ್ಳಿಯ ಹೋಟೆಲ್ ಡೆನಿಸನ್ಸ್‌ನಲ್ಲಿ ಇಲಾಖೆ ಆಯುಕ್ತರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಪಂಚಾಯಿತಿ ಅಧ್ಯಕ್ಷ ಮತ್ತು ಸದಸ್ಯರ ಸಹಭಾಗಿತ್ವದಲ್ಲಿ ಬದು ನಿರ್ಮಾಣ, ಕಲ್ಯಾಣಿ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೆರೆ ಹೂಳೆತ್ತುವುದು, ಕಾಲುವೆಗಳ ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪರಿಣಾಮ ಕಾರಿಯಾಗಿ ಅನುಷ್ಠಾನ ಮಾಡಿ ಎಂಐಎಸ್ ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆಗೆ ಚಿಕ್ಕರಹಳ್ಳಿ ಗ್ರಾಮ ಪಂಚಾಯಿತಿ ಪಾತ್ರವಾಗಿದೆ. 2020 -21 ನೇ ಸಾಲಿನಲ್ಲಿ 1 ಲಕ್ಷದ 12 ಸಾವಿರ ಮಾನವ ದಿನಗಳನ್ನು ಸೃಹಿಸಿದ್ದಾರೆ. ಇದು ಜಿಲ್ಲೆಯಲ್ಲಿ ಅತಿ ಮಾನವ ದಿನಗಳನ್ನು ಸೃಜಿಸಿದ ಗ್ರಾಮ ಪಂಚಾಯಿತಿ ಆಗಿದ್ದು ಈ ಅಂಕಿ ಅಂಶಗಳನ್ನು ಆಧಾರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲ್ಲಿನ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಿಕಾರ್ಜುನ ಅವರನ್ನು ಉತ್ತಮ ಅಧಿಕಾರಿ ಎಂದು ಪರಿಗಣಿಸಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವು ಅಲ್ಲಿನ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗು ಸದಸ್ಯರು, ಸಿಬ್ಬಂದಿಸಂತಸ ವ್ಯಕ್ತಪಡಿಸಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
