ವಿಜಯನಗರ: (ಏ-23) ಕೂಡ್ಲಿಗಿ ತಾಲ್ಲೂಕಿನ ಹೂಡೇಂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ 6 ಹಳ್ಳಿಗಳಿಗೆ ಭೇಟಿ ಕೊಟ್ಟು ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಹೂಡೇಂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಅವರ ನೇತೃತ್ವದಲ್ಲಿ ಹೂಡೇಂ ಗ್ರಾಮದ ವ್ಯಾಪ್ತಿಯ 6 ಹಳ್ಳಿಗಳಿಗೆ ಹೋಗಿ ರಸ್ತೆಗಳಲ್ಲಿ ಸಂಚರಿಸಿ, ಮಾಸ್ಕ್ ಧರಿಸದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳ ಮೇಲೆ ದಂಡ ಹಾಕುವ ಮೂಲಕ ಚುರುಕು ಮುಟ್ಟಿಸಿದರು. ನೋಟಿಸ್ ಅಂಗಡಿಗಳ ಮುಂದೆ ಹಚ್ಚಿಸಲಾಯಿತು. ಕೋವಿಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರು ಪಡೆಯಲೇಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ ವ್ಯಾಪಾರ ಪರವಾನಗಿಯನ್ನು ರದ್ದು ಮಾಡುವ ಎಚ್ಚರಿಕೆ ನೀಡಿದರು. ಬಟ್ಟೆ ಅಂಗಡಿಗಳು, ಫ್ಯಾನ್ಸಿ ಅಂಗಡಿಗಳು, ಕಿರಣ್ ಅಂಗಡಿಗಳು, ಬ್ಯಾಂಕ್, ಮದ್ಯ ಅಂಗಡಿ ಸೇರಿದಂತೆ ಯಾವುದೇ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಅಂಗಡಿಕಾರರು ಮುಂಜಾಗ್ರತೆ ಕ್ರಮಗಳ ಕುರಿತು ಭೇಟಿ ನೀಡಿ, ಜಾಗೃತಿಯನ್ನೂ ಮೂಡಿಸಿದರು. ಹಾಗೂ ಈ ಸಂದರ್ಭದಲ್ಲಿ ಮಂಜುನಾಥ ಎಚ್ ಹೂಡೇಂ ಪತ್ರಕತ್ರರು, ಮಹಾಂತೇಶ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
