;

ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಿಂದ ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು ಚರ್ಚೆ,,,!!!

*ದಿನಾಂಕ.26.4.2021. ವಿಜಯನಗರ ಜಿಲ್ಲೆ ಕೂಡ್ಲಿಗಿ* *ತಾಲ್ಲೂಕು*
*ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು* *ಮೂಲಸೌಕರ್ಯ ಅಭಿವೃದ್ಧಿ , ಹಜ್* *ಮತ್ತು ವಕ್ಫ್* *ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ಆನಂದ್ ಸಿಂಗ್ ಇವರಅಧ್ಯಕ್ಷತೆಯಲ್ಲಿ ಮತ್ತು ಕೂಡ್ಲಿಗಿ ತಾಲೂಕ್ ವಿಧಾನಸಭಾ ಶಾಸಕರಾದ ಶ್ರೀ ಎನ್ ವೈ ಗೋಪಾಲಕೃಷ್ಣ ರವರ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಯಿತು* *ಕೊರೊನಾ ಹರಡದಂತೆ ಪ್ರತಿಯೊಬ್ಬರು ಶ್ರಮಿಸಬೇಕು, ಸಚಿವ ಆನಂದ್ ಸಿಂಗ್.*

ಕೂಡ್ಲಿಗಿ: ಕೊರೊನಾ ಹರಡದಂತೆ ತಡೆಯುವ ಸವಾಲು ನಮ್ಮ ಮೇಲಿದ್ದು, ಈ ಬಗ್ಗೆ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಮೂಲ ಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊರೊನಾ ತಡಗಟ್ಟುವಲ್ಲಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ
ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಂಡೂರು, ಹೊಸಪೇಟೆ ಹಾಗೂ ಬಳ್ಳಾರಿಯಲ್ಲಿ ಹೆಚ್ಚು ಪ್ರಕರಣಗಳು ಬರುತ್ತಿದ್ದು, ಈ ತಾಲ್ಲೂಕಿನಲ್ಲಿ ಪ್ರಮಾಣ ಕಡಿಮೆ ಇದೆ. ಆದರೂ ಈ ಬಗ್ಗೆ ಉದಾಸೀನ ಮಾಡದೆ ಜವಬ್ದಾರಿಯಿಂದ ಕೆಲಸ ಮಾಡಬೇಕು. ಜನರು ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಲು ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಒಂದು ಸಾವಿರ ಅಕ್ಸಿಜನ್ ಸಹಿತ ಹಾಸಿಗೆಯನ್ನು ವ್ಯವಸ್ಥೆ ಮಾಡಲಿ ಸಂಜೀವಿನ ಆಸ್ಪತ್ರೆಯವರು ಮುಂದೆ ಬಂದಿದ್ದಾರೆ ಎಂದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞರಿಲ್ಲದ ಬಗ್ಗೆ ತಾಲ್ಲೂಕು ಆರೋಗ್ಯಧಿಕಾರಿ ಡಾ. ಷಣ್ಮುಖ ನಾಯ್ಕ್ ಸಭೆಯ ಗಮನಕ್ಕೆ ತಂದಾಗ, ತಕ್ಷಣ ಬಳ್ಳಾರಿಯಿಂದ ಒಬ್ಬರನ್ನು ನಿಯೋಜನೆ ಮಾಡುವಂತೆ ಜಿಲ್ಲಾ ಆರೋಗ್ಯಧಿಕಾರಿಗೆ ಸಚಿವರು ಸೂಚಿಸಿದರು.
ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತಯರಿಗೆ ಅಕ್ಸಿಮಿಟರ್ ಪೂರೈಕೆ ಮಾಡುವಂತೆ ಶಾಸಕ ಎನ್.ವೈ. ಗೋಪಾಲಕೃಷ್ಣ ಸಚಿವರಿಗೆ ಕೋರಿದರು. ಇದಕ್ಕೆ ಸಚಿವ ಆನಂದ್ ಸಿಂಗ್ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಕ್ಸಿಮಿಟರ್ ಕಳಿಸುವಂತೆ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿಗೆ ಹೇಳಿದರು.
ಕೆಲವು ಗ್ರಾಮಗಳಲ್ಲಿ ಲಸಿಕೆ ಹಾಕುವ ಪ್ರಗತಿ ಕಡಿಮೆ ಇದ್ದು ಅಂತಹ ಗ್ರಾಮಗಳಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಜೊತೆಯಲ್ಲಿ ನರೇಗಾ ಯೋಜನೆಯಲ್ಲಿ ಗುಂಪು ಗುಂಪಾಗಿ ಕೆಲಸ ಮಾಡುವ ಕಾರ್ಮಿಕರ ಬಗ್ಗೆ ನೀಗಾ ಇಡಬೇಕು ಎಂದು ತಿಳಿಸಿದರು.
ತಾಲ್ಲೂಕಿನಲ್ಲಿ ಪ್ರಸ್ತುತ ೧೨೩ ಸಕ್ರಿಯ ಪ್ರಕರಣಗಳು ಇದ್ದು, ಇವುಗಳಲ್ಲಿ ೬೮ ಜನ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಅಕ್ಸಿಜನ್ ಪಡೆಯುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ೨೧ ಅಕ್ಸಿಜನ್ ಹಾಸಿಗೆಗಳು ಲಭ್ಯಗಿದ್ದು, ಐಸಿಯು-೭, ವೆಂಟಿಲೇಟರ್-೬ ಇದ್ದಾರೆ.
ವಿಜಯನಗರ ವಿಶೇಷ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ, ಎಎಸ್ಪಿ ಲಾವಣ್ಯ ಇದ್ದರು. ಹೊಸಪೇಟೆ ಸಹಾಯಕ ಆಯುಕ್ತ ಸಿದ್ರಾಮೇಶ್ವರ,ತಹಶೀಲ್ದಾರ್ ಎಸ್. ಮಹಬಲೇಶ್ವರ, ತಾಲ್ಲುಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಜಿಲ್ಲಾ ಆರೋಗ್ಯಧಿಕಾರಿ ಡಾ. ಜನಾರ್ಧನ. ಶಾಸಕರ ಆಪ್ತ ಕಾರ್ಯದರ್ಶಿ ಶ್ರೀಕಾಂತ್ ಸೇರಿದಂತೆ ತಾಲೂಕಿನ ಯಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

*ಡಿ ಎಂ ಈಶ್ವರಪ್ಪ ಸಿದ್ದಾಪುರ*

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend