;

ಜಿಲ್ಲೆಯಲ್ಲಿ 90 ಜನರಿಗೆ ಕೋವಿಡ್ ಸೋಂಕು ದೃಢ: 84 ಮಂದಿ ಬಿಡುಗಡೆ…!!!

ಜಿಲ್ಲೆಯಲ್ಲಿ 90 ಜನರಿಗೆ ಕೋವಿಡ್ ಸೋಂಕು ದೃಢ: 84 ಮಂದಿ ಬಿಡುಗಡೆ
***
ಚಿತ್ರದುರ್ಗ,ಏಪ್ರಿಲ್26:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 90 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,737ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 36, ಚಳ್ಳಕೆರೆ 07, ಹಿರಿಯೂರು 18, ಹೊಳಲ್ಕೆರೆ 05, ಹೊಸದುರ್ಗ 10, ಮೊಳಕಾಲ್ಮುರು ತಾಲ್ಲೂಕಿನಲ್ಲಿ 05 ಹಾಗೂ ಹೊರ ಜಿಲ್ಲೆಯ 09 ಪ್ರಕರಣಗಳು ಸೇರಿದಂತೆ ಒಟ್ಟು 90 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ  84 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 1448 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 90 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 16,737 ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,784 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 883 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,34,449 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,06,521 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,88,454 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 621 ಜನರ ವರದಿ ಬರುವುದು ಬಾಕಿ ಇದೆ. 709 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ..

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;