ಬೆಂಗಳೂರು: ಕರೊನಾ ಮೊದಲನೆಯ ಅಲೆ ಅಲ್ಲೆಲ್ಲೋ ದೂರದಲ್ಲಿ ಯಾರೋ ಸತ್ತರು ಎಂಬ ಸುದ್ದಿಯನ್ನು ಹೊತ್ತು ತಂದಿದ್ದು ಹೆಚ್ಚಾದರೆ, ಕರೊನಾ ಎರಡನೆಯ ಅಲೆಯ ಸಾವಿನ ಸುದ್ದಿಗಳಲ್ಲಿ ಪರಿಚಿತ ಹೆಸರುಗಳೇ ಹೆಚ್ಚು ಎಂಬ ಮಾತು ಅಲ್ಲಲ್ಲಿ ಕೇಳಿ ಬರುತ್ತಿದ್ದವು. ಅದಕ್ಕೆ ಪೂರಕ ಎಂಬಂತೆ ಇದೀಗ ಸಂಭವಿಸುತ್ತಿರುವ ಸಾವಿನ ಪ್ರಕರಣಗಳೂ ಸಾಕ್ಷಿಯಾಗುತ್ತಿವೆ.
ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿರುವ ನಿರ್ಮಾಪಕ, ಕನಸಿನ ರಾಣಿ ಎಂದು ಹೆಸರಾಗಿರುವ ನಟಿ ಮಾಲಾಶ್ರೀ ಅವರ ಪತಿ ರಾಮು ಅವರು ಕೋವಿಡ್-19 ಸೋಂಕಿನಿಂದಾಗಿ ಮೃತ ಪಟ್ಟಿದ್ದಾರೆ. ಒಂದು ವಾರದ ಹಿಂದೆ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಉಸಿರಾಟದ ಸಮಸ್ಯೆಗೂ ಒಳಗಾಗಿದ್ದರು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಅಸುನೀಗಿದ್ದಾರೆ.

ಅವರಿಗೆ 52 ವರ್ಷ ವಯಸ್ಸಾಗಿತ್ತು.
‘ರಾಜಕೀಯ’ ಸಿನಿಮಾ ಮೂಲಕ ನಿರ್ಮಾಪಕರಾದ ಅವರು ಬಳಿಕ ಗೋಲಿಬಾರ್, ಲಾಕಪ್ ಡೆತ್ ಚಿತ್ರಗಳ ಮೂಲಕ ಯಶಸ್ಸು ಹಾಗೂ ಜನಪ್ರಿಯತೆ ಗಳಿಸಿದರು. ಕಲಾಸಿಪಾಳ್ಯ, ಸಿಬಿಐ ದುರ್ಗಾ, ಎಕೆ-47, ಹಾಲಿವುಡ್, ಮುತ್ತಿನಂಥ ಹೆಂಡ್ತಿ, ಹಲೋ ಸಿಸ್ಟರ್ ಮುಂತಾದ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದರು. ಪ್ರಜ್ವಲ್ ದೇವರಾಜ್ ಅಭಿನಯದ ‘ಅರ್ಜುನ್ ಗೌಡ’ ಚಿತ್ರಕ್ಕೆ ಅವರು ಬಂಡವಾಳ ಹೂಡಿದ್ದು, ಅದು ನಿರ್ಮಾಣ ಹಂತದಲ್ಲಿ ಇರುವಾಗಲೇ ಅವರು ಇನ್ನಿಲ್ಲವಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು.ರಾಜಕೀಯ’ ಸಿನಿಮಾ ಮೂಲಕ ನಿರ್ಮಾಪಕರಾದ ಅವರು ಬಳಿಕ ಗೋಲಿಬಾರ್, ಲಾಕಪ್ ಡೆತ್ ಚಿತ್ರಗಳ ಮೂಲಕ ಯಶಸ್ಸು ಹಾಗೂ ಜನಪ್ರಿಯತೆ ಗಳಿಸಿದರು. ಕಲಾಸಿಪಾಳ್ಯ, ಸಿಬಿಐ ದುರ್ಗಾ, ಎಕೆ-47, ಹಾಲಿವುಡ್, ಮುತ್ತಿನಂಥ ಹೆಂಡ್ತಿ, ಹಲೋ ಸಿಸ್ಟರ್ ಮುಂತಾದ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದರು. ಪ್ರಜ್ವಲ್ ದೇವರಾಜ್ ಅಭಿನಯದ ‘ಅರ್ಜುನ್ ಗೌಡ’ ಚಿತ್ರಕ್ಕೆ ಅವರು ಬಂಡವಾಳ ಹೂಡಿದ್ದು, ಅದು ನಿರ್ಮಾಣ ಹಂತದಲ್ಲಿ ಇರುವಾಗಲೇ ಅವರು ಇನ್ನಿಲ್ಲವಾಗಿದ್ದಾರೆ.
ವರದಿ.ನಳಿನಿ ಬೆಂಗಳೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
