;

ಚನೈ ಸೂಪರ್ ಕಿಂಗ್ಸ್ ವಿರುದ್ಧ ಧಾಖಲೆ ಗೆಲುವಿನ ಓಟವನ್ನುಮುಂದುವರೆಸಿದ ಮುಂಬೈ ಇಂಡಿಯನ್ಸ್…!!!

ನವದೆಹಲಿ: ಗೆಲುವಿನ ಅಲೆಯಲ್ಲಿ ತೇಲುತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ತಂಡ ಸೋಲಿನ ಶಾಕ್ ನೀಡಿದ್ದು, 4 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಮುಂಬೈ ಇಂಡಿಯನ್ಸ್ ತಂಡ 4 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 219 ರನ್​ಗಳ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ಕೀರನ್ ಪೊಲಾರ್ಡ್ ಅವರ (ಅಜೇಯ 87 ರನ್) ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಮುಂಬೈ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಕೀರನ್ ಪೊಲಾರ್ಡ್ ಕೇವಲ 34 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 6 ಬೌಂಡರಿ ಸಹಿತ 87 ರನ್ ಕಲೆಹಾಕಿದರು.ಉಳಿದಂತೆ ಕ್ವಿಂಟನ್ ಡಿ ಕಾಕ್ 38, ರೋಹಿತ್ ಶರ್ಮಾ 35 ಹಾಗೂ ಕೃಣಾಲ್ ಪಾಂಡ್ಯ 32 ರನ್ ದಾಖಲಿಸಿ ಗೆಲುವಿನಲ್ಲಿ ಸಾಥ್ ನೀಡಿದರು.

ನ್ಯೂಸ್ ಬ್ಯುರೋ ನವದೆಹಲಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;