;

ಹುಬ್ಬಳ್ಳಿಯಲ್ಲಿ ಐವರ ಲೈಫ್ ನ್ನು ಮೋಟಕುಗೊಳಿಸಿದ ಲೈಫ್ ಲೈನ್ ಆಸ್ಪತ್ರೆ…!!!

ಹುಬ್ಬಳ್ಳಿ: ಆಕ್ಸಿಜನ್ ಸಮಸ್ಯೆಯಿಂದ ಐವರು ಕೊರೊನಾ ಸೋಂಕಿತರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಲೈಫ್‌ಲೈನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿಯೇ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಇತ್ತ ಕುಟುಂಬಸ್ಥರು ಆಕ್ಸಿಜನ್ ಕೊರತೆಯಿಂದಲೇ ದುರ್ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಡಿಎಚ್ಓ ಯಶವಂತ್ ಮದನಿಕರ ಸೇರಿದಂತೆ ಡಿಸಿಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಸೋಂಕಿತರ ಸಾವಿನ ಬಗ್ಗೆ ತನಿಖೆಯ ನಂತರವೇ ಖಚಿತ ಮಾಹಿತಿ ಲಭ್ಯವಾಗಲಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಎಚ್ಓ ಯಶವಂತ್ ಮದನಿಕರ ಅವರು, ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ವರದಿ. ಮಹಾಲಿಂಗ ಗಗ್ಗರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;