;

ಚಳ್ಳಕೆರೆ ತಾಲೂಕು ಕೋವಿಡ್ ಸೆಂಟರ್ ಗೆ ಭೇಟಿ ನೀಡಿದ ಶಾಸಕ ಟಿ ರಘುಮೂರ್ತಿ…!!!

ಚಳ್ಳಕೆರೆ ತಾಲೂಕು ಕೋವಿಡ್ ಸೆಂಟರ್ ಗೆ ಭೇಟಿ ನೀಡಿದ ಶಾಸಕ ಟಿ ರಘುಮೂರ್ತಿ.

ಕೋವಿಡ್ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದ ಶಾಸಕರು

ಕೋವಿಡ್ ತಡೆಗಟ್ಟಲು ತಾಲೂಕು ವ್ಯಾಪ್ತಿಯಲ್ಲಿ
ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕರು.

ಎಚ್ಚರಿಕೆಯಿಂದ ಕೆಲಸ ನಿರ್ವಹಿಸುವಂತೆ ವೈದ್ಯಾಧಿಕಾರಿಗಳ ತಂಡಕ್ಕೆ ಸೂಚಿಸಿದ ಶಾಸಕರು.

ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಚಳ್ಳಕೆರೆ ತಾಲೂಕು ಆಡಳಿತ ಹಾಗೂ ವೈದ್ಯಾ ಧಿಕಾರಿಗಳ ತಂಡ ನಿರಂತರವಾಗಿ ಶ್ರಮಿಸುತ್ತಿದೆ. ಇದರ ಭಾಗವಾಗಿ ಇಂದು, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ಇಂದು, ತಾಲೂಕು ದಂಡಧಿಕಾರಿಗಳು ಹಾಗೂ ತಾಲೂಕು ಮುಖ್ಯ ವೈದ್ಯಅಧಿಕಾರಿಗಳ ತಂಡದೊಂದಿಗೆ ತಾಲೂಕು ಕೋವಿಡ್ ಕೆರ್ ಸೆಂಟರ್ ಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳು ಕುರಿತಂತೆ ಪರಿಶೀಲನೆ ನಡೆಸಿದರು.

ಇದೇ ವೇಳೆ ತಾಲೂಕು ವೈದ್ಯಧಿಕಾರಿಗಳ ತಂಡದೊಂದಿಗೆ ಚರ್ಚೆ ನಡೆಸಿದ ಮಾನ್ಯ ಶಾಸಕರು ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವುದು, ಹಾಗೂ ತಾಲೂಕು ಮಟ್ಟದಲ್ಲಿ ಕೋವಿಡ್ ತಡೆಗಟ್ಟಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;