;

ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗೂಡಿ ಚಾಲನೆ ನೀಡಿದರು…!!!

ಕೋಲಾರದ ಮಾಲೂರಿನಲ್ಲಿ ಶಾಸಕ ‌ನಂಜೇಗೌಡ ಅವರು ಹಮ್ಮಿಕೊಂಡಿರುವ 36 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್, ತರಕಾರಿ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗೂಡಿ ಚಾಲನೆ ನೀಡಿದೆ.
ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರ ನೆರವಿಗೆಂದು ನಾಲ್ಕು ಆಂಬುಲೆನ್ಸ್ ವಾಹಗಳನ್ನು ಕಾಂಗ್ರೆಸ್ ವತಿಯಿಂದ ನೀಡಲಾಯಿತು. ಸ್ಥಳೀಯ ಕಾಂಗ್ರೆಸ್ ಕಚೇರಿಯನ್ನು ಇಂದಿರಾ ಕ್ಯಾಂಟೀನ್ ಸ್ವರೂಪದಲ್ಲಿ ಪರಿವರ್ತಿಸಲಾಗಿದ್ದು, ನಿತ್ಯ 2000 ಮಂದಿ ಬಡವರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕರಾದ ರೂಪಾ ಶಶಿಧರ್, ಶರತ್ ಬಚ್ಚೇಗೌಡ, ಎಂಎಲ್ಸಿ ನಾಸೀರ್ ಅಹಮದ್, ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ವಿ.ಆರ್. ಸುದರ್ಶನ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ವರದಿ. ಎಂ. ಕೆ. ಮೂರ್ತಿ ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;