ನಾಯಕನಹಟ್ಟಿ: ಯುವ ಮೋರ್ಚಾ ಬಿಜೆಪಿ ಮಂಡಲದ ವತಿಯಿಂದ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ವಿತರಣೆ.!!

ಚಿತ್ರದುರ್ಗ: ನಾಯಕನಹಟ್ಟಿ ಯುವ ಮೋರ್ಚ ಬಿಜೆಪಿ ಮಂಡಲದ ವತಿಯಿಂದ ಇಂದು ಪೊಲೀಸ್ ಠಾಣೆ ಆವರಣದಲ್ಲಿ
ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ವಿತರಣೆ ಮಾಡಲಾಯಿತು. ಕೂರೂನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ದಾದಿಯರ ಸಮಾನವಾಗಿ ಪೊಲೀಸರು ಸಹ ಹೋರಾಟ ನಡೆಸುತ್ತಿದ್ದಾರೆ. ಇವರು ಹಗಲು-ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಕೂರೊನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಮಾಸ್ಕ್, ಸ್ಯಾನಿಟೈಜರ್ ವಿತರಿಸಲಾಯಿತು. ಕೊರೊನಾ ಸೋಂಕು ತಡೆಯುವಲ್ಲಿ ಪೊಲೀಸರು, ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ’ ಎಂದು ಪಿ.ಎಸ್‌.ಐ ಮಹೇಶ್ ಹೊಸಪೇಟೆ ಅವರು ಹೇಳಿದರು. ಹೀಗಾಗಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಾಸ್ಕ್ ಉತ್ತರಿಸಿ ನಂತರ ಬೀದಿ ಬದಿಯಲ್ಲಿರುವ ಜನರಿಗೆ ವಿತರಿಸಿದರು. ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷರಾದ ವಿಷ್ಣು ಸಿಂಹ, ಉಪಾಧ್ಯಕ್ಷರು ತಿಪ್ಪೇಸ್ವಾಮಿ, ಅಧ್ಯಕ್ಷರಾದ ಪಾಲಯ್ಯ, ಮಧು ಕುಮಾರ್, ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend